Breaking News

ಕಾಂಗ್ರೆಸ್ ಪಕ್ಷದ ವತಿಯಿಂದ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ : ಸಚಿವ ಈಶ್ವರ ಖಂಡ್ರೆ

ಹುಬ್ಬಳ್ಳಿ: ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿವೆ. ಕಾಂಗ್ರೆಸ್ ಪಕ್ಷದ ವತಿಯಿಂದ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಗೆಲುವಿನ ಒಲವು ನಮ್ಮ ಕಡೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು,ಇನ್ನು ಕೊಟ್ಟ ಮಾತಿನಂತೆ ನಡೆದಿದ್ದೇವೆ. ನಾವು ಗೆದ್ದೇ ಗೆಲ್ತಿವಿ. ಶಿಗ್ಗಾಂವಿಯಲ್ಲಿ ಪಠಾಣ್ ನಾಮಪತ್ರ ಸಲ್ಲಿಕೆಗೆ ಬಂದಿದ್ದೇನೆ. ನಾಯಕರನ್ನು ಒಂದು ಕಡೆ ಸೇರಿಸಿ ಚುನಾವಣೆ ಎದುರಿಸ್ತೇವೆ. ಎಲ್ಲ ಕಡೆ ಕಾಂಗ್ರೆಸ್ ಗೆಲ್ಲಿಸ್ತೇವೆ. ಬಿಜೆಪಿಯಿಂದ ಜನರು ಹಾಗೂ ಅವರ ಶಾಸಕರು ಬೇಸತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ. ಪ್ರಜಾಸತ್ತಾತ್ಮಕದಿಂದ ಆಯ್ಕೆ ಆದ ಸರ್ಕಾರವನ್ನು ಬುಡಮೇಲು ಮಾಡಲು ಹೊರಟಿದ್ದಾರೆ ಎಂದರು.

Share News

About Shaikh BigTv

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *