Breaking News

ಬೀದರ್ ನಲ್ಲಿ ಸಾಲ ಬಾಧೆಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ರೈತರು

ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಬೀದರ ತಾಲೂಕಿನಲ್ಲಿ ನಡೆದಿದೆ.
ಕಪಲಾಪುರ ಗ್ರಾಮದ‌ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್‌ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ‌ ಮಿರ್ಜಾಪುರ್ (ಟಿ) ಗ್ರಾಮದ‌ ಸುಭಾಷ ಮಾರುತಿ‌ ಹೊಸಗೊಂಡ (65) ಎಂಬುವರು ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಭಾಷ ಅವರಿಗೆ ಎರಡು ಎಕರೆ ಜಮೀನಿದ್ದು, ಐದು ಲಕ್ಷ ರೂ. ಸಾಲ ಮಾಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ ಬಗದಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *