ಕುಂದಗೋಳ : ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಚೆನ್ನಮ್ಮನ 200ನೇಯ ಜಯಂತ್ಯುತ್ಸವ ಮತ್ತು ವಿಜಯೋತ್ಸವ ಕಾರ್ಯಕ್ರಮವು ನಾಳೆ ಅ.26 ರಂದು ಸವಾಯಿ ಗಂಧರ್ವ ಸ್ಮಾರಕ ಭವನ ಕುಂದಗೋಳದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮವನ್ನು ಪಾವನ ದಿವ್ಯ ಸಾನಿಧ್ಯವನ್ನು ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು, ದಿವ್ಯ ಸಾನಿಧ್ಯವನ್ನು ಷ.ಬ.ಶ್ರೀ ಶಿತಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪಂಚಗ್ರಹ ಹಿರೇಮಠ, ಶಿವಾನಂದ ಮಹಾಸ್ವಾಮಿಗಳು ಶಿವಾನಂದ ಮಠ, ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ, ಕಲ್ಯಾಣಪುರ ಮಠ ವಹಿಸುವರು.
ಮಧ್ಯಾಹ್ನ 1 ಗಂಟೆಗೆ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಸಭಾ ಕಾರ್ಯಕ್ರಮದ ಬಳಿಕ, ಅನ್ನಸಂತರ್ಪಣೆ ನೆರವೇರಿಸುವುದು, ಬಳಿಕ ಮದ್ಯಾಹ್ನ 3 ಗಂಟೆಗೆ ಕುಂದಗೋಳ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಮೆರವಣಿಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹಾಗೂ ಮುಖಂಡರು, ಗಣ್ಯ ವ್ಯಕ್ತಿಗಳು ಯುವಕ ಮಂಡಳಿ ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಲಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

