ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56, 993 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು, ಇಂದು ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ನಾಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಯಲಿದೆ. ಜಂಟಿ ಸಮೀಕ್ಷಾ ವರದಿಗಳ ಪರಿಶೀಲನೆಯ ನಂತರ 15 ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದರು.
ಚಿತ್ರದುರ್ಗ ಜಿಲ್ಲೆಯ ಬೆಳಘಟ್ಟ, ವಿಜಾಪುರ ಲಕ್ಷ್ಮೀಸಾಗರ, ಗೌರಮ್ಮನಹಳ್ಳಿ ಮತ್ತು ಸಾದರಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಈರುಳ್ಳಿ, ಮೆಕ್ಕೆಜೋಳ, ಕಡಲೆಕಾಯಿ ಮತ್ತು ಇತರ ಮಳೆ ಆಶ್ರಿತ ಬೆಳೆಗಳ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ರೈತರೊಂದಿಗೆ ಮಾತನಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

