ಹುಬ್ಬಳ್ಳಿ: ಅವಳಿ ನಗರದ ಪೊಲೀಸ್ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ ಶಶಿಕುಮಾರ್ ಅವರ ಆರೋಗ್ಯದಲ್ಲಿ ಧಿಡೀರ್ ಏರುಪೇರಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಮೂರು ತಿಂಗಳಿಂದ ಅವಳಿ ನಗರದ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಮಿಷನರ್ ಎನ್ ಶಶಿಕುಮಾರ್ ಅವಳಿ ನಗರದಲ್ಲಿರುವ ಎಲ್ಲ ಪ್ರದೇಶಗಳಿಗೂ ಕೂಡಾ ಕಾಲ್ನಡಿಗೆಯಲ್ಲಿ ಪ್ರತಿದಿನ ನಾಲ್ಕರಿಂದ ಐದು ಕಿ.ಲೋ ಮೀಟರ್ ಓಡಾಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ್ದರು.
ಗುರುವಾರ ಕೂಡಾ ರಾತ್ರಿ 10 ಗಂಟೆಯಿಂದ ಬೆಳ್ಳಿಗ್ಗೆಯಿನ 6 ಗಂಟೆಯವರೆಗೂ ಅವಳಿ ನಗರವನ್ನು ಬೈಕ್ ನಲ್ಲಿಯೇ ಓಡಾಡಿ ಗಸ್ತು ಮಾಡಿದ್ದರು. ಹೀಗಾಗಿ ಕಳೆದ ಮೂರು ತಿಂಗಳಿಂದ ಬಿಡುವಿಲ್ಲದೆ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

