ಕಲಘಟಗಿ: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಕೆರೆಗಳಿಂದ ಗ್ರಾಮಗಳಿಗೆ ಬರುತ್ತಿರುವ ನೀರು ಕಲುಷಿತಗೊಂಡಿರುವುದರಿಂದ, ಮುತ್ತಗಿ ಗ್ರಾಮದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವುದು ಹಾಗೂ ಕುಡಿಯುವ ನೀರಿಗೆ ಕ್ಲೋರಿನೇಷನ್ ಮಾಡಿ ಸ್ವಚ್ಛ ಹಾಗೂ ಶುದ್ಧವಾದ ನೀರನ್ನು ಗ್ರಾಮದ ಸಾರ್ವಜನಿಕರಿಗೆ ಒದಗಿಸಲು ಮುತ್ತಗಿ ಗ್ರಾಮ ಪಂಚಾಯತಿಯ ಪಿಡಿಓ ಪ್ರವೀಣಕುಮಾರ ಗಣಿ ಇವರಿಗೆ ದೂರವಾಣಿ ಮುಖಾಂತರ ಸೂಚಿಸಲಾಗಿತ್ತು.
ಶುದ್ಧವಾದ ಕುಡಿಯುವ ನೀರನ್ನು ಗ್ರಾಮ ಪಂಚಾಯತಿಯಿಂದ ಸರಬರಾಜು ಮಾಡದೇ ಇರುವುದರಿಂದ ಕಲುಷಿತ ನೀರನ್ನು ಸೇವಿಸಿ, ೪೪ ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ-ಬೇಧಿಯಿಂದ ಕಲಘಟಗಿ ತಾಲ್ಲೂಕು ಆಸ್ಪತ್ರೆಗೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮ ವಹಿಸದೇ ಇರುವ ಕಾರಣ ಮತ್ತು ಕರ್ತವ್ಯದಲ್ಲಿ ನಿರ್ಲಕ್ಷತೆ ವಹಿಸಿದ್ದರಿಂದ ಪಿಡಿಓ ಪ್ರವೀಣಕುಮಾರ ಗಣಿ ಅವರನ್ನು ಅಮಾನತ್ತುಗೊಳಿಸಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಶುಕ್ರವಾರ ಮಧ್ಯಾಹ್ನ ಆದೇಶ ಹೊರಡಿಸಿದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

