Breaking News

ಶಿಗ್ಗಾಂವಿ ಕ್ಷೇತ್ರದಲ್ಲೇ ನಮಗೆ ಹೆಚ್ಚು ಮತ ಬಂದಿದೆ. ನಮ್ಮ ಅಭ್ಯರ್ಥಿ ಸಮರ್ಥರು ಇದ್ದಾರೆ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ 64 ಸಾವಿರ ಮತ ಪಡೆದಿದ್ದರು. ಆಗ ಬಸವರಾಜ ಬೊಮ್ಮಾಯಿ ಅವರು ಗೆದ್ದಿರಬಹುದು. ಆದರೆ ನಮ್ಮಅಭ್ಯರ್ಥಿ ಒಳ್ಳೆಯ ಫೈಟ್ ಕೊಟ್ಟಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲೇ ನಮಗೆ ಹೆಚ್ಚು ಮತ ಬಂದಿದೆ. ನಮ್ಮ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸಮರ್ಥರಾಗಿದ್ದಾರೆ. ನಮಗೆ ಭರತ್ ಬೊಮ್ಮಾಯಿ ಸಮರ್ಥ ಎದುರಾಳಿ ಅಲ್ಲವೇ ಅಲ್ಲ. ಈ ಬಾರಿ ಕೂಡ ನಮಗೆ ಲೀಡ್ ಬರಲಿದೆ.

ಇನ್ನು ಬಿಜೆಪಿಯ 8 ಶಾಸಕರು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿ ಸಿಎಂ, ‘ಅದರ ಬಗ್ಗೆ ಅವರನ್ನೇ ಕೇಳಿ’ ಎಂದರು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *