ಔರಾದ್: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಲಾಭ ಶೇ 95ರಷ್ಟು ಜನರಿಗೆ ತಲುಪಿದೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಯಿಂದ ಮಹಿಳೆಯರು ತುಂಬಾ ಖುಷಿಯಲ್ಲಿದ್ದಾರೆ ಇದು ಅವರ ಸ್ವಾವಲಂಬಿ ಬದುಕಿಗೆ ಪೂರಕವಾಗಿದೆ ಇಡೀ ದೇಶದಲ್ಲೇ ಈ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಲಾಭದಿಂದ ದೂರ ಉಳಿದವರನ್ನು ಗುರುತಿಸಬೇಕು ಅವರ ಮನೆಗೆ ಹೋಗಿ ಏನೇನು ದಾಖಲೆ ಬೇಕು ಪಡೆದು ಅವರಿಗೆ ಯೋಜನೆ ಲಾಭ ಕೊಡಿಸಬೇಕು. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜತೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಸರ್ಕಾರದ ಎಲ್ಲ ಯೋಜನೆಗಳು ಅರ್ಹರಿಗೆ ತಲುಪಬೇಕು ರಸ್ತೆ, ಕುಡಿಯುವ ನೀರು ಹಾಗೂ ಇತರೆ ಮೂಲ ಸೌಲಭ್ಯ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚೆನ್ನಪ್ಪ ಉಪ್ಪೆ ಮಾತನಾಡಿ ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಈ ಬಗ್ಗೆ ಮುಖ್ಯಮಂತ್ರಿಗಳು ಪದೇ ಪದೇ ಹೇಳುತ್ತಿದ್ದಾರೆ ಗ್ಯಾರಂಟಿ ಯೋಜನೆ ಸೇರಿದಂತೆ ಯಾವುದೇ ಕೆಲಸಕ್ಕೆ ಜನ ಕಚೇರಿಗೆ ಬಂದಾಗ ಅಧಿಕಾರಿಗಳು ಅವರನ್ನು ಸ್ಪಂದಿಸಬೇಕು ಎಂದರು.
ತಾ.ಪಂ.ಇಒ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಪಕ್ಷದ ಹಿರಿಯ ಮುಖಂಡ ಭೀಮಸೇನರಾವ ಸಿಂಧೆ, ಬಾಳಾಸಾಹೇಬ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಆನಂದ ಚವಾಣ್, ರಾಮಣ್ಣ ವಡೆಯರ್, ಸುಧಾಕರ್ ಕೊಳ್ಳೂರ್, ಡಾ. ಫಯಾಜ್, ದತ್ತು ಬಾಪುರೆ, ಡಿ.ಕೆ. ಚಂದು, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಾಜಕುಮಾರ ಕಂದಗೂಳೆ, ವಿಷ್ಣು ಗುಡಪಳ್ಳಿ, ದತ್ತು ಉಜನಿ, ಶಿವಕುಮಾರ ಪಾಟೀಲ, ಚೆನ್ನಬಸಪ್ಪ ಬಿರಾದಾರ, ಸಲ್ಲಾವುದ್ದಿನ್ ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

