Breaking News

ದೀಪಾವಳಿ ಹಬ್ಬದ ಪ್ರಯುಕ್ತ ಕೆ ಎಸ್ ಆರ್ ಟಿ ಸಿ ಯಿಂದ ಹೆಚ್ಚುವರಿಯಾಗಿ 2 ಸಾವಿರ ಬಸ್ ಗಳ ವ್ಯವಸ್ಥೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ, ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 2000 ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ 02.11.2024ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30.10.2024 ರಿಂದ 01.11.2024 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದಿದೆ.
ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.11.2024 ಹಾಗೂ 04.11.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *