ಬೆಂಗಳೂರು : ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ ನಲ್ಲಿ ಭಾರಿ ಮಳೆಯಾಗಿದ್ದು ಈ ಒಂದು ಮಳೆಯ ಅವಾಂತರದಿಂದ ಅನೇಕ ಪ್ರದೇಶಗಳಲ್ಲಿ ಬೆಳೆಹಾನಿ ಸೇರಿದಂತೆ ಅನೇಕರು ಮನೆಗಳನ್ನು ಕಳೆದುಕೊಂಡಿದ್ದಾರೆ. ಇದೀಗ ಪೂರ್ತಿಯಾಗಿ ಮನೆ ಕಳೆದುಕೊಂಡವರಿಗೆ 1.20 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಗೃಹಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಹಾನಿಯ ಬಗ್ಗೆ ಡಿಸಿ ಸಿಇಓಗಳ ಹಾಗೂ ಎಸ್ ಪಿ ಗಳ ಸಭೆ ಮಾಡಿದ್ದೇನೆ. ಬೆಂಗಳೂರು ಸೇರಿದಂತೆ ಹಲವೆಡೆ ಹಿಂಗಾರು ಮಳೆಯಿಂದ ಹಾನಿಯಾಗಿದೆ ಅಕ್ಟೋಬರ್ 1 ರಿಂದ 25 ರವರೆಗೆ 181 ಮಿಲಿ ಮೀಟರ್ ಮಳೆಯಾಗಿದೆ ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ ರಾಜ್ಯದಲ್ಲಿ ಇದುವರೆಗೂ 25 ಜನರು ಮಳೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ. ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಳೆಯಿಂದ 9 ಸಾವಿರ ಹೆಕ್ಟರ್ ಕೃಷಿ ಜಮೀನು ಹಾಳಾಗಿದೆ 50 ಸಾವಿರ ಹೆಕ್ಟರ್ ತೋಟಗಾರಿಕಾ ಪ್ರದೇಶ ಕೂಡ ಹಾನಿಯಾಗಿದೆ. ಈ ಬಗ್ಗೆ ಜಂಟಿ ಸರ್ವೆ ಮಾಡಿ ಒಂದು ವಾರದೊಳಗೆ ಸರ್ವೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಡಿಸಿ ಜಿಲ್ಲಾ ಪಂಚಾಯತ್ ಸಿಇಓ ಗಳ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

