ಬೆಂಗಳೂರು: ಝಣ-ಝಣಾ ಕಾಂಚಾಣದ ಕಾಂಗ್ರೆಸ್ ಸರ್ಕಾರದಲ್ಲಿ ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ ನಾಳೆ ರಸ್ತೆಯೂ ಮಾಯ ಎಲ್ಲಾ ಮಾಯಾ ನಾಳೆ ನಾವೂ ಮಾಯ ಎಂದು ರಾಜ್ಯ ಸರ್ಕಾರದ ವಿರುದ್ದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಾ ಪ್ರಹಾರ ನಡೆಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರೇ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ, ಆ ಹಣವೆಲ್ಲಾ ಏನಾಯ್ತು ಎಂದು ಪ್ರಶ್ನೆಸಿದ್ದಾರೆ.
ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರಿದಿರುವ ಯಾಮಸ್ವರೂಪಿ ರಸ್ತೆ ಗುಂಡಿಗಳನ್ನು ನೋಡಿದರೆ ಬಹುಶಃ ಆ ದುಡ್ಡೆಲ್ಲವೂ ತಮ್ಮ ಕಮಿಷನ್ ಪಾಲಾದಂತಿದೆ. ಅಥವಾ ಈಗ ಚನ್ನಪಟ್ಟಣ ಚುನಾವಣೆ ಖರ್ಚಿಗೆ ಆ ಹಣ ಸಾಗಿಸಿದ್ದೀರೋ, ಬ್ರ‍್ಯಾಂಡ್ ಬೆಂಗಳೂರು ಕಟ್ಟುವುದು ದೂರದ ಮಾತು ಸ್ವಾಮಿ, ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ ಎಂದು ಟೀಕೆಗಳ ಸುರಿಮಳೆಗೈದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

