Breaking News

ನವೆಂಬರ್‌ ಅಂತ್ಯದೊಳಗೆ ತೆಲಂಗಾಣದಲ್ಲಿ ಜಾತಿ ಸಮೀಕ್ಷೆ ಪೂರ್ಣ: ಸಚಿವ ಪೊನ್ನಂ ಪ್ರಭಾಕರ್

ಹೈದರಾಬಾದ್‌: ತೆಲಂಗಾಣ ಸರ್ಕಾರವು ನವೆಂಬರ್ ಮೊದಲ ವಾರದಲ್ಲಿ ಜಾತಿ ಸಮೀಕ್ಷೆ ಪ್ರಾರಂಭಿಸುವ ನಿರೀಕ್ಷೆಯಿದ್ದು ತಿಂಗಳ ಅಂತ್ಯದೊಳಗೆ ಅದನ್ನು ಪೂರ್ಣಗೊಳಿಸುವ ಸಾಧ್ಯತೆಯಿದೆ ಎಂದು ಸಚಿವ ಪೊನ್ನಂ ಪ್ರಭಾಕರ್ ಹೇಳಿದರು.
ಸಚಿವ ಸಂಪುಟ ಸಭೆ ನಂತರ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರದಾದ್ಯಂತ ಜಾತಿ ಸಮೀಕ್ಷೆ ನಡೆಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬದ್ಧತೆಗೆ ಅನುಗುಣವಾಗಿ ಜಾತಿ ಸಮೀಕ್ಷೆ ನಡೆಸಲಾಗುತ್ತದೆ ಎಂದರು.
ಸಮೀಕ್ಷೆ ನಡೆಸಲು 80 ಸಾವಿರ ಸರ್ಕಾರಿ ನೌಕರರನ್ನು ನಿಯೋಜಿಸಲಾಗುವುದು ಮತ್ತು ಅವರಿಗೆ ಸೂಕ್ತ ತರಬೇತಿ ನೀಡಲಾಗುತ್ತದೆ ಎಂದು ಪ್ರಭಾಕರ್ ಹೇಳಿದರು.
ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯದ ಪ್ರಕಾರ, ರಾಜ್ಯ ಸಚಿವ ಸಂಪುಟವು ಜಾತಿ ಸಮೀಕ್ಷೆಯನ್ನು ನವೆಂಬರ್ 4 ಅಥವಾ 5 ರಿಂದ ಪ್ರಾರಂಭಿಸುವ ನಿರೀಕ್ಷೆಯಿಟ್ಟುಕೊಂಡಿದ್ದು, ನವೆಂಬರ್ 30ರೊಳಗೆ ಪೂರ್ಣಗೊಳಿಸುವ ಸಾಧ್ಯತೆಯಿದೆ ಎಂದರು.
ಸಂಗ್ರಹಿಸಿದ ಎಲ್ಲ ದತ್ತಾಂಶಗಳನ್ನು ಸಾರ್ವಜನಿಕಗೊಳಿಸಲಾಗುತ್ತದೆ ಎಂದು ತಿಳಿಸಿದರು.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *