Breaking News

ಬಿ.ಕೆ ಹರಿಪ್ರಸಾದ್ ವಿರುದ್ಧ “ವಿಶ್ವ ವಿಪ್ರ ಸೇವಾ” ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣ ಕುಲಕರ್ಣಿ ಆಕ್ರೋಶ

ಹುಬ್ಬಳ್ಳಿ: ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ವಿರುದ್ಧ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವಹೇಳನಕಾರಿ ಪದ ಬಳಕೆ ಮಾಡಿದ್ದು ತಪ್ಪು, ತಕ್ಷಣವೇ ಕ್ಷಮೆ ಕೇಳಬೇಕೆಂದು ವಿಶ್ವ ವಿಪ್ರ ಸೇವಾ ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮವರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಮತ್ತು ಹಿಂದೂ ಸಮಾಜವನ್ನು ಹಾಳು ಮಾಡುವ ದುರುದ್ದೇಶದಿಂದ, ಮಾಡಿದ ಜನಗಣತಿಯ ಕುರಿತು ಅತ್ಯಂತ ಸಮರ್ಥವಾಗಿ ಹೇಳಿಕೆಯನ್ನು ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ನೀಡಿದ್ರು,
ಹೇಳಿಕೆಯನ್ನು ಖಂಡಿಸುವುದರ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದರವರು ಪರಮ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಎಂದು ಅವರಿಗೆ ಅವಮಾನ ಮಾಡಿದ್ದಾರೆ. ಇದು ಕೇವಲ ಸ್ವಾಮೀಜಿಯವರಿಗೆ ಮಾಡಿರುವ ಅವಮಾನ ಅಲ್ಲಾ ಸನಾತನ ಹಿಂದೂ ಸಮಾಜಕ್ಕೆ ಮಾಡಿದಂತಹ ಅವಮಾನ, ಮೊದಲು ಬಿ.ಕೆ ಹರಿಪ್ರಸಾದ ಅವರು ಜಾತಿಗಣತಿಯ ಬಗ್ಗೆ ತಿಳಿಯಲಿ. ಹಾಗೂ ತಕ್ಷಣವೇ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಅವರಿಗೆ ಹಾಗೂ ಹಿಂದೂ ಸಮಾಜಕ್ಕೆ ಕ್ಷಮೆ ಕೇಳಬೇಕು. ಇಲ್ಲವಾದರೆ ವಿಶ್ವ ವಿಪ್ರ ಸೇವಾ ಟ್ರಸ್ಟ್ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *