ಬೆಂಗಳೂರು: ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ ಇದು ಯಾವುದು ವಕ್ಫ್ ಜಮೀನಲ್ಲ ರೈತರ ಜಮೀನು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಬಹಳಷ್ಟು ಚರ್ಚೆ ಆಗುತ್ತಿದೆ.
ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿದ್ದಾರೆ ತಹಶೀಲ್ದಾರ್ ಜೊತೆ ರೈತರ ಜೊತೆಗೆ ಚರ್ಚೆ ಮಾಡಿ, ರೈತರ ಒಂದಿಂಚು ಜಮೀನು ತಪ್ಪಾಗಿ ವಕ್ಫ್‌ಗೆ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದ್ದೆ. ಇದಾದ ಮೇಲೆ ತೇಜಸ್ವಿ ಸೂರ್ಯ ಕೂಡ ಹೋಗಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಇದು ದೊಡ್ಡ ಸುದ್ದಿ ಆಗಿದೆ ಎಂದರು.
ವಕ್ಫ್ ಆಸ್ತಿಗಳು 1974, 1978 ಗೆಜೆಟ್ ನೋಟಿಫಿಕೇಷನ್ ಆಗಿದೆ 2016ರಲ್ಲೂ ಗೆಜೆಟ್ ನೋಟಿಫಿಕೇಷನ್ ಆಗಿದೆ ಇದು ಮೂರನೇ ಬಾರಿಗೆ ನೋಟಿಫಿಕೇಷನ್ ಆಗಿದೆ ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ. ಇದು ಯಾವುದು ವಕ್ಫ್ ಜಮೀನಲ್ಲ ರೈತರ ಜಮೀನು ಎಂದು ಹೇಳಿದರು. ವಿಜಯಪುರದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ರೆವೆನ್ಯೂ ರೆಕಾರ್ಡ್ಸ್ ತೆಗೆದುಕೊಂಡು ನಾನೇ ಖುದ್ದಾಗಿ ಬಗೆಹರಿಸುತ್ತೇನೆ. ಮುಂದಿನ ದಿನಗಳಲ್ಲಿ ನಾನೇ ಸಭೆ ಮಾಡುತ್ತೇನೆ ಹೊನ್ನಾವಡದಲ್ಲಿ 11 ಎಕರೆ ಮಾತ್ರ ವಕ್ಫ್ ಜಾಗ ಇದೆ, ಯಾವುದೇ ಕಾರಣಕ್ಕೂ ಒಂದೇ ಒಂದು ಇಂಚು ತಪ್ಪಾಗಿ ರೈತರ ಜಮೀನನ್ನು ನೀಡುವುದಿಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

