ಬೆಂಗಳೂರು: ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದ್ದಂತೆ ಇದೀಗ ಬೆಂಗಳೂರು ಭಾಗದ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರು ಭಾಗದ ಕ್ಷೇತ್ರಗಳಿಗೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನೆಯಲ್ಲಿರುವ ಅನುದಾನ ಬಳಸಿಕೊಂಡು ಅನುದಾನ ನೀಡುವಂತೆ ಸೂಚನೆ ನೀಡಿರುವ ಡಿ.ಕೆ.ಶಿವಕುಮಾರ್, ಈ ಅನುದಾನವನ್ನು ತುರ್ತು ಕಾಮಗಾರಿಗಳಿಗೆ ಶಾಸಕರೊಂದಿಗೆ ಚರ್ಚಿಸಿ ಕ್ರಿಯಾ ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ 27 ಕ್ಷೇತ್ರಗಳಿಗೆ ಒಟ್ಟು 265 ಕೋಟಿ ರೂ. ಬಿಡುಗಡೆ ಮಾಡಲು ಸೂಚನೆ ನೀಡಲಾಗಿದ್ದು, ಆನೇಕಲ್ ಕ್ಷೇತ್ರಕ್ಕೆ ಐದು ಕೋಟಿ ರೂಪಾಯಿ ಬಿಡುಗಡೆಯಾಗಿದ್ದರೆ, ಇನ್ನುಳಿದ ಎಲ್ಲ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

