ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-2024ಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು 7 ಅಭ್ಯರ್ಥಿಗಳು ಒಟ್ಟು 13 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್ ಹೆಚ್. ಡಿ. ತಿಳಿಸಿದ್ದಾರೆ.
ಸಂಡೂರು ಉಪ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್. ವೆಂಕಣ್ಣ, ಟಿ. ಎರ‍್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ. ಎಂ. ಮಾರುತಿ ಒಂದೊಂದು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅನ್ನಪೂರ್ಣ ಅವರು 4 ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು 4 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಜಿನಪ್ಪ ಒಂದು ನಾಮಪತ್ರ ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

