ಬೆಂಗಳೂರು: ವಕ್ಫ್ ಬೋರ್ಡ್ ಜೊತೆ ಸೇರಿಕೊಂಡು ರೈತರ 15 ಸಾವಿರ ಎಕರೆ ಭೂಮಿಯನ್ನು ಕಬಳಿಸಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಕ್ಫ್ ಹೆಸರಲ್ಲಿ ರೈತರ ಭೂಮಿಯನ್ನು ಸರ್ಕಾರ ಕಿತ್ತುಕೊಳ್ಳಲು ಮುಂದಾಗಿದೆ.
ಹರಿಜನರಿಗೆ ನೋಟಿಸ್ ಕೊಟ್ಟು ಅವರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ದೂರಿದರು.
ಲೋಕಸಭೆಯಲ್ಲಿ ಜಂಟಿ ಸದನ ಸಮಿತಿ ವಕ್ಫ್ ತಿದ್ದುಪಡಿ ಸಂಬಂಧ ಚರ್ಚೆ ನಡೆಸುತ್ತಿದೆ. ಅಷ್ಟರಲ್ಲಿ ಭೂಮಿ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ ಈ ಸಂದರ್ಭದಲ್ಲಿ ನೋಟಿಸ್ ಕೊಡುವ ಅಗತ್ಯ ಇರಲಿಲ್ಲ. ಬಿಜೆಪಿ ಪಕ್ಷದಿಂದ ಸರ್ಕಾರಕ್ಕೆ ಮತ್ತು ವಕ್ಫ್ ಬೋರ್ಡ್ ಗೆ 15 ದಿನಗಳ ಗಡುವು ನೀಡುತ್ತಿದ್ದೇವೆ. 15 ದಿನಗಳಲ್ಲಿ ಪಹಣಿ ತಿದ್ದುಪಡಿಯಾಗಿ ಭೂಮಿ ರೈತರ ಹೆಸರಿಗೆ ಸೇರಬೇಕು ಇಲ್ಲದಿದ್ದರೆ ರೈತರನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

