ವಿಜಯಪುರ: ಜಿಲ್ಲೆಯ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್ ನೀಡಿರುವ ವಿಚಾರವು ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದು, ಮತ್ತೊಂದೆಡೆ ಇದೇ ವಿಚಾರ ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ದೇಶನದಂತೆ ಒಂದು ತಂಡ ಕೂಡ ರಚನೆಯಾಗಿದೆ.
ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿ ವತಿಯಿಂದ ತಂಡ ರಚಿಸಲಾಗಿದೆ. ಈ ತಂಡವು ಅಕ್ಟೋಬರ್ 29ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದೆ. ಬಿಜೆಪಿ ರಚಿಸಿರುವ ತಂಡದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಅರುಣ್ ಶಹಾಪುರ ಇದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

