Breaking News

ಗ್ರಾಮ ಆಡಳಿತ ಅಧಿಕಾರಿ ಲಿಖಿತ ಪರೀಕ್ಷೆ: ಶೇ.80 ರಷ್ಟು ಮಂದಿ ಹಾಜರು

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಯ(ವಿಎಒ) ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆದಿದ್ದು, ಶೇ.80ರಷ್ಟು ಮಂದಿ ಹಾಜರಾಗಿದ್ದಾರೆ.
ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆದಿದೆ.
ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ.80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ.
ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳನ್ನು ಅತಿ ಸೂಕ್ಷ್ಮ ಎಂದು ಪರಿಗಣಿಸಿದ್ದ ಕಾರಣ ಆ ಜಿಲ್ಲೆಗಳಲ್ಲಿ ಹೆಚ್ಚಿನ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *