Breaking News

ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ಸಮೀಕ್ಷಾ ಕಾರ್ಯ

ನವಲಗುಂದ : ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ, ಹತ್ತಿ ಮೆಣಸಿನ ಗಿಡ, ಈರುಳ್ಳಿ ಬೆಳೆ ಸೇರಿ ಹಲವು ಬೆಳೆಗಳು ಹಾಳಾಗಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಕಂದಾಯ ಇಲಾಖೆ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ಸಮೀಕ್ಷಾ ಕಾರ್ಯವನ್ನು ಕೈಗೆತ್ತಿಕೊಂಡಿವೆ.

ತಾಲೂಕಿನ ತಿರ್ಲಾಪುರ ಗ್ರಾಮದ ರೈತ ವಿರೂಪಾಕ್ಷಯ್ಯ ಬಸಲಿಂಗಯ್ಯ ಹಿರೇಮಠ ಅವರ ಅರೇಕುರಹಟ್ಟಿ ಹದ್ದಿನ ಜಮೀನಿನಲ್ಲಿ ಹತ್ತಿ ಬೆಳೆ ಹಾಳಾಗಿರುವುದನ್ನು ತಹಶೀಲ್ದಾರ ಸುದೀರ್ ಸಾಹುಕಾರ ಅವರು ಸಮೀಕ್ಷಾ ಕಾರ್ಯದ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಪ್ರಸ್ತುತ ತಾಲೂಕಿನಲ್ಲಿ ಅಂದಾಜು 11,547 ಹೆಕ್ಟೇರ್ ಮಳೆಯಾಶ್ರಿತ ಬೆಳೆ ಹಾಗೂ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ ಈರುಳ್ಳಿ ಬೆಳೆ 2,200 ಹೆಕ್ಟೇ‌ರ್ ಪ್ರದೇಶದಲ್ಲಿ ಹಾನಿಯಾಗಿದೆ. ವರದಿಯೊಂದನ್ನು ಈ ಕುರಿತು ಸಿದ್ದಪಡಿಸಿ, ಅದನ್ನು ಶೀಘ್ರದಲ್ಲೇ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *