Breaking News

ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್​ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್​ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ.
ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ‌ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ. ನಿವೃತ್ತ ಹೈ ಕೋರ್ಟ್, ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ರಾಜ್ಯ ಸರ್ಕಾರದಿಂದ, ಆಯೋಗಕ್ಕೆ ಸೂಚನೆ ನೀಡಲಾಗಿದೆ. ಹೀಗಾಗಿ ಮುಂದಿನ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದ್ದು, ಇಂದಿನಿಂದ ಯಾವುದೇ ನೇಮಕಾತಿ ನೋಟಿಫಿಕೇಶನ್ ಆದ್ರೆ ಆಯೋಗದ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *