ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು.
ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಅವರ ಜೀವನ ಮಟ್ಟ ಸುಧಾರಿಸುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಸ್ವ ಸಹಾಯ ಗುಂಪುಗಳ ಪರವಾಗಿ ಗೃಹ ಉತ್ಪನ್ನಗಳನ್ನು ದೀಪಾವಳಿಯ ಹಬ್ಬದ ಪ್ರಯುಕ್ತ ನೀಡಲಾಯಿತು.
ಐಎಎಸ್ ಅಧಿಕಾರಿ ದೃಷ್ಟಿ ಜೈಸ್ವಾಲ್, ಶ್ರೀ ಲಕ್ಷ್ಮಿ ಜಲಾನಯನ ಸಂಘದ ಈಳಿ, ಸಾಗರದ ಪ್ರತಿನಿಧಿ ಶ್ರೀಮತಿ ಪ್ರತಿಮಾ ಹಾಗೂ ಪ್ರಗತಿ ಸ್ವಸಹಾಯ ಸಂಘದ ಪ್ರತಿನಿಧಿ ಶ್ರೀಮತಿ ಜ್ಯೋತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

