Breaking News

ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ : ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ. ಆದಾಗ್ಯೂ NDA ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ಕಾಂಗ್ರೆಸ್ ನವರು ಈ ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಚಿವರನ್ನು ಇರಿಸಿ, ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನವರು ಭ್ರಮನಿರಸನರಾಗಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಸರ್ಕಾರಿ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ಮೆಷಿನರಿ ಉಪಯೋಗಿಸಿಕೊಂಡು ದುಡ್ಡು ಹಂಚುತ್ತಿದ್ದಾರೆ. ಆದರೆ, ಇದನ್ನೆಲ್ಲ ಮೀರಿ NDA ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಪ್ರಹ್ಲಾದ ಜೋಶಿ ಹೇಳಿದರು.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಎಲ್ಲೆಡೆಯೂ ಕಾಂಗ್ರೆಸ್ ಮಂತ್ರಿ ಮಂಡಲವೇ ಬೀಡು ಬಿಟ್ಟಿದೆ. ಇದರಿಂದಲೇ ಗೊತ್ತಾಗುತ್ತದೆ ಸೋಲುವ ಭಯದಲ್ಲಿ ಏನೇನು ತಂತ್ರ ಹೆಣೆದು ಅದೆಷ್ಟೋ ಹಣ ಚೆಲ್ಲುತ್ತಿದ್ದಾರೆಂದು ಜೋಶಿ ಕುಟುಕಿದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *