Breaking News

ಪ್ರವಾಸೋದ್ಯಮ ಅಭಿವೃದ್ಧಿಗೆ 47 ಸಾವಿರ ನೇರ ಉದ್ಯೋಗ ಕಲ್ಪಿಸುವ ಗುರಿ: ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರಕಾರದ ಮಹತ್ವದ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, 2024-29ರ ವರೆಗೆ ಈ ನೀತಿ ಜಾರಿಯಲ್ಲಿರುತ್ತದೆ. 9 ಪ್ರಮುಖ ಕೇಂದ್ರೀಕೃತ ಪ್ರದೇಶಗಳನ್ನು ಗುರುತಿಸಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದಕ್ಕೆ ಯೋಜಿಸಲಾಗಿದೆ.
ಕನಿಷ್ಟ 47 ಸಾವಿರ ಜನರಿಗೆ ನೇರ ಉದ್ಯೋಗ ಕಲ್ಪಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಪ್ರವಾಸೋದ್ಯಮ ಸಚಿವರೂ ಆಗಿರುವ ಎಚ್‌.ಕೆ. ಪಾಟೀಲ್‌ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, 25 ವಿಷಯಾಧಾರಿತ ಕ್ಷೇತ್ರಗಳ 44 ಯೋಜನೆಗಳನ್ನು ಗುರುತಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, 30 ಸಾವಿರ ಜನ ರಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ. ಒಟ್ಟು 1,500 ಕೋಟಿ ರೂ. ಬಂಡವಾಳ ಹೂಡಿಕೆಯನ್ನು ಸರ್ಕಾರ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *