ರಾಯಚೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ರೈತರು ಸದುಪಯೋಗಪಡೆಯಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ತಿಳಿಸಿದ್ದಾರೆ.
ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರಿಗೆ 3.00 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‍ಗೆ 6,783 ರೂ.ಗಳ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು.
ಆಸಕ್ತರ ರೈತರು ರಾಯಚೂರು ತಾಲೂಕಿನ ಹುಣಸಿಹಾಳಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಖರೀದಿ ಕೇಂದ್ರದ ಕಾರ್ಯದರ್ಶಿ ಷಣ್ಮುಖ.ಜಿ ದೂರವಾಣಿ ಸಂಖ್ಯೆ: 9743695467, ದೇವದುರ್ಗ ತಾಲೂಕಿನ ಜಾಲಹಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಖರೀದಿ ಕೇಂದ್ರದ ಕಾರ್ಯದರ್ಶಿ ನರಸಿಂಗ ನಾಯಕ ದೂರವಾಣಿ ಸಂಖ್ಯೆ: 7899312989, ಮಸ್ಕಿ ತಾಲೂಕಿನ ಮಟ್ಟೂರು ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಖರೀದಿ ಕೇಂದ್ರದ ಕಾರ್ಯದರ್ಶಿ ವೀರೇಶ ದೇಸಾಯಿ ದೂರವಾಣಿ ಸಂಖ್ಯೆ: 9113649836, ಸಿಂಧನೂರು ತಾಲೂಕಿನ ಜವಳಗೇರಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಖರೀದಿ ಕೇಂದ್ರದ ಕಾರ್ಯದರ್ಶಿ ದೇವರಾಜ ದೂರವಾಣಿ ಸಂಖ್ಯೆ: 9964165509, ಸಿಂಧನೂರು ತಾಲೂಕಿನ ಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಖರೀದಿ ಕೇಂದ್ರದ ಕಾರ್ಯದರ್ಶಿ ಚನ್ನನಗೌಡ ದೂರವಾಣಿ ಸಂಖ್ಯೆ:9964315868, ಮಾನವಿ ತಾಲೂಕಿನ ತೋರಣದಿನ್ನಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಖರೀದಿ ಕೇಂದ್ರದ ಕಾರ್ಯದರ್ಶಿ ಬಸಯ್ಯ ದೂರವಾಣಿ ಸಂಖ್ಯೆ: 9902387316, ಲಿಂಗಸೂಗುರು ತಾಲೂಕಿನ ಮೊದಿಕಿನಾಳ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಖರೀದಿ ಕೇಂದ್ರದ ಕಾರ್ಯದರ್ಶಿ ಕೊಟ್ರಪ್ಪ ದೂರವಾಣಿ ಸಂಖ್ಯೆ: 9663704921ಗೆ ಸಂಪರ್ಕ ಮಾಡಬಹುದಾಗಿದೆ.
ರೈತರ ನೊಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ. ರೈತರಿಂದ ಶೇಂಗಾ ಖರೀದಿಸುವ ಸಂಬಂಧ ಖರಿದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್ಸ್ ಐ.ಡಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಶೇಂಗಾ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪರಿಡಿಸಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

