Breaking News

ವಕ್ಫ್‌ ಆಸ್ತಿಯೆಂದು ರೈತರಿಗೆ ನೀಡಿದ ನೋಟಿಸ್‌ ವಾಪಸ್ ಪಡೆಯುತ್ತೇವೆ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆ ರೈತರಿಗೆ ಮತ್ತು ಮಠ, ಮಂದಿರಗಳಿಗೆ ವಕ್ಫ್ ಆಸ್ತಿಯೆಂದು ನೋಟೀಸ್ ನೀಡಲಾಗಿದ್ದರೆ, ಎಲ್ಲ ನೊಟೀಸ್‌ಗಳನ್ನು ವಾಪಸ್ ಪಡೆದುಕೊಳ್ಳುತ್ತೇವೆ ಎಂದು ಮುಖ್ಯಮತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ರೈತರಿಗೆ ನೊಟೀಸ್ ನೀಡುವ ಮೂಲಕ ಯಾವುದೇ ರೈತರನ್ನು ಒಕ್ಕಲೆಬ್ಬಿಸಲ್ಲ. ನಿನ್ನೆ ಈ ಬಗ್ಗೆ ಕಂದಾಯ ಸಚಿವರು ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸಲ್ಲ ಒಂದೊಮ್ಮೆ ನೊಟೀಸ್ ಕೊಟ್ಟಿದ್ದರೆ ನೊಟೀಸ್ ವಾಪಸ್ ಪಡೆಯುತ್ತೇವೆ. ಧಾರವಾಡದಲ್ಲೂ ರೈತರಿಗೆ ನೊಟೀಸ್ ಕೊಟ್ಟಿದ್ದರೆ ನಾವು ಅದನ್ನು ಪರಿಶೀಲನೆ ಮಾಡಲಾಗುವುದು ಎಂದು ಸ್ಪಷ್ಟನೆಯನ್ನು ನೀಡಿದರು.
ಒಳ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ತಿರ್ಮಾನ ಮಾಡಿದ್ದೇವೆ. ಸೂಕ್ತ ದಾಖಲೆ ಸಂಗ್ರಹ ಮಾಡಲು ಆಯೋಗ ಮಾಡ್ತೇವೆ ಆಯೋಗ 3 ತಿಂಗಳಲ್ಲಿ ವರದಿ ಕೊಡಲಿದೆ ಇವತ್ತೇ ಆಯೋಗದ ಜಡ್ಜ್ ನೇಮಕ ಮಾಡಲಾಗುತ್ತದೆ. ಆಯೋಗ ರಚನೆಯ ಹಿನ್ನೆಲೆಯಲ್ಲಿ ಹೊಸ ಹುದ್ದೆಯ ನೇಮಕ ಇಲ್ಲ ಹಳೆಯ ಅಧಿಸೂಚನೆ ಪ್ರಕಾರ ನೇಮಕಾತಿ ನಡೆಯುತ್ತಿರುವುದು ಮುಂಮದುವರಿಯಲಿದೆ ಎಂದು ಮಾಹಿತಿ ನೀಡಿದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *