ಬೆಂಗಳೂರು: ಇಡೀ ದೇಶದಲ್ಲಿ ನಡೆದ ಉದ್ಯೋಗ ಮೇಳದಲ್ಲಿ 50 ಸಾವಿರ ಮಂದಿಗೆ ನೇಮಕಾತಿ ಪತ್ರ ನೀಡಲಾಗಿದ್ದು, ಇವರಲ್ಲಿ 20 ಸಾವಿರ ಮಂದಿಗೆ ಅಂಚೆ ಇಲಾಖೆ ಉದ್ಯೋಗ ನೀಡಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಅಂಚೆ ಇಲಾಖೆ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ರೋಜ್‌ಗಾರ್ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಉದ್ಯೋಗಿಗಳನ್ನು ಕರ್ಮಯೋಗಿಗಳು ಎಂದು ಪ್ರಧಾನಿ ಕರೆದಿರುವುದು ಅವರ ಹೊಸ ಚಿಂತನೆಯಾಗಿದೆ ಎಂದು ಹೇಳಿದರು.
ಎಲ್ಲಾ ಸರ್ಕಾರಿ ನೌಕರರು ಮೋದಿ ಅವರ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ಶೇಕಡ 8 ರಷ್ಟಿದ್ದ ದೇಶದ ನಿರುದ್ಯೋಗ ಪ್ರಮಾಣ, ಈಗ ಶೇಕಡ 7 ರಷ್ಟಿರುವುದು ಸಂತಸದ ಸಂಗತಿಯಾಗಿದೆ ಎಂದರು. ಇದೇ ವೇಳೆ ಬೆಂಗಳೂರಿನಲ್ಲಿ 160 ಪ್ರಶಿಕ್ಷಣಾರ್ಥಿಗಳಿಗೆ ಮಂದಿಗೆ ಕುಮಾರಸ್ವಾಮಿ ನೇಮಕಾತಿ ಪತ್ರ ವಿತರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

