Breaking News

ಮುಡಾದಲ್ಲಿ ಇಡಿ ತನಿಖೆ ಮುಂದುವರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ

ಧಾರವಾಡ: ಮುಡಾದಲ್ಲಿ ಇಡಿ ತನಿಖೆ ಮುಂದುವರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆಗಿದೆ. ಹೀಗಾಗಿ ಇಡಿ ವಿಚಾರಣೆ ಮುಂದುವರೆದಿದ್ದು, ಲಕ್ಷಾಂತರ ರೂಪಾಯಿಯ ಬಂಡವಾಳ ಬಯಲಾಗುತ್ತಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರಿಗೆ ಹತ್ತಿರದವರು ಹಾಗೂ ಅವರಿಗೆ ಬೇಕಾದವರು ಈ ಪ್ರಕರಣದಲ್ಲಿ ಇದ್ದಾರೆ. ಸ್ವತಃ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಭೂ ಕಬಳಿಕೆ ಮಾಡಿದ್ದಾರೆ. ವಾಲ್ಮೀಕಿ ಹಗರಣದಲ್ಲಿಯೂ ಇಡಿ ಮಧ್ಯ ಪ್ರವೇಶಿಬೇಕು ಎಂದು ಜೋಶಿ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಿಯೇಂದ್ರ ವಿರುದ್ಧ ರಮೇಶ
ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಜೋಶಿ,ರಮೇಶ ಜಾರಕಿಹೊಳಿಗೆ ನಾನು ವಿನಂತಿ ಮಾಡುವೆ,ಮೊದಲು ಕಾಂಗ್ರೆಸ್ ಸೋಲಿಸಬೇಕಿದೆ, ಮುಸ್ಲಿಂ ತುಷ್ಟಿಕರಣ ಮಾಡುತ್ತಿದೆ. ಹಿಂದೂಗಳಿಗೆ ಅನ್ಯಾಯ ಮಾಡುತ್ತಿದೆ. ಈ ಸಮಯದಲ್ಲಿ ಕಾಂಗ್ರೆಸ್‌ಗೆ ಸರಿಯಾದ ಪಾಠ ಕಲಿಸಬೇಕಿದೆ,ಏನೇ ಭಿನ್ನಾಭಿಪ್ರಾಯ ಇದ್ದರೂ ಬಹಿರಂಗವಾಗಿ ವ್ಯಕ್ತಪಡಿಸಬಾರದು, ಎಲ್ಲರೂ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ವಿನಂತಿ ಮಾಡುವೆ ಎಂದರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *