ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯಲ್ಲಿ, ಸಂಜನಾ ಕೆಳುಡಿ (18) ಎಂಬ ಯುವತಿ ತಮ್ಮ ಮನೆಯ ಬೆಡ್ ರೂಮ್‌ನಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆಯೊಂದು ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ನವನಗರದ ಸ್ವಾಮಿ ವಿವೇಕಾನಂದರ ವೃತ್ತ ಪ್ರಜಾನಗರ ವಿಶ್ವ ಭಾರತಿ ಲೇಔಟ್ ಹತ್ತಿರ ಈ ಘಟನೆ ನಡೆದಿದೆ. ಇನ್ನು ಈ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

