ಧಾರವಾಡ: ರೈತರ ಜಮೀನಿನ ಪಹಣಿ ಪತ್ರಿಕೆಯಲ್ಲಿ ವಕ್ಷ ಆಸ್ತಿ ಎಂದು ನಮೂದಾಗಿದ್ದರಿಂದ ಆಕ್ರೋಶಗೊಂಡ ರೈತರು ಧಾರವಾಡ ತಹಶೀಲ್ದಾರ್ ಕಚೇರಿ ಎದುರು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಮಾಜಿ ಶಾಸಕರಾದ ಅಮೃತ ದೇಸಾಯಿ ಹಾಗೂ ಸೀಮಾ ಮಸೂತಿ ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದರು.
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಅವರ ಜಮೀನಿಗೆ ವಕ್ಷ ಆಸ್ತಿ ಎಂದು ನಮೂದಾಗಿದ್ದರಿಂದ ಕಂಗಾಲಾದ ರೈತರು ಧಾರವಾಡ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

