ಬೆಂಗಳೂರು : ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಮುಖ್ಯಮಂತ್ರಿಗಳು, ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.
ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್ಗಳು ಸ್ವೀಕರಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಸದ್ಯದಲ್ಲೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ. ವೋಲ್ವೋ ಬಸ್ಗಳು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಅವಕಾಶ ಸಿಕ್ಕಾಗ ನಮ್ಮ ಸಂಪುಟದ ಸಹೋದ್ಯೋಗಿಗಳೆಲ್ಲಾ ಬಸ್ನಲ್ಲಿ ಒಟ್ಟಿಗೆ ಪ್ರಯಾಣ ಮಾಡುತ್ತೇವೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

