Breaking News

ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ಹಾಗೂ ಶಹರ ಠಾಣೆಯ ಪೋಲಿಸರು ದಾಳಿ: 19 ಜನ ಆರೋಪಿಗಳ ಬಂಧನ

ಹುಬ್ಬಳ್ಳಿ: ಮಂಟೂ‌ರ್ ರಸ್ತೆಯಲ್ಲಿ ರೌಡಿಶೀಟರ್‌ಗಳು ನಡೆಸುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ಹಾಗೂ ಶಹರ ಠಾಣೆಯ ಪೊಲೀಸರು ದಾಳಿಯನ್ನು ಮಾಡಿದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ ಆರೋಪದಡಿಯಲ್ಲಿ 6 ಜನ ರೌಡಿ ಶೀಟರ್‌ಗಳು ಸೇರಿದಂತೆ 19 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಟೂ‌ರ್ ರಸ್ತೆಯ ಮನೆಯೊಂದರಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹಲವು ರೌಡಿ ಶೀಟರ್‌ಗಳು ಸೇರಿ ಇಸ್ಪೀಟ್ ಆಡಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಹಲವು ರೌಡಿ ಶೀಟರ್‌ಗಳು ಪೊಲೀಸರನ್ನು ದೂಕಿ ಪೊಲೀಸರ ಹ್ಯಾಂಡಿ ಕ್ಯಾಮ್ ಒಡೆದು ಹಾಕಿ ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಸಿಸಿಬಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಮಿಷನ‌ರ್ ಎನ್ ಶಶಿಕುಮಾ‌ರ್ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಬಂಧಿತ ಆರೋಪಿಗಳಿಂದ 61,000 ಸಾವಿರ ನಗದು, 11 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಮೇಲೆ ಶಹರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಜೂಜಾಟದ ಪ್ರಕರಣ ದಾಖಲಿಸಲಾಗಿದೆ ಎಂದು ಕಮಿಷನ‌ರ್ ಶಶಿಕುಮಾ‌ರ್ ಹೇಳಿದ್ದಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *