Breaking News

ಸಚಿವ ಈಶ್ವರ ಖಂಡ್ರೆ ಎಚ್ಎಂಟಿ ಜಾಗಕ್ಕೆ ಅತಿಕ್ರಮ ಪ್ರವೇಶ: ಕೇಂದ್ರ ಸಚಿವ ಕುಮಾರಸ್ವಾಮಿ

ಚನ್ನಪಟ್ಟಣ: ಅರಣ್ಯ ಸಚಿವ ಈಶ್ವರ ಖಂಡ್ರೆ ಎಚ್‌ಎಂಟಿ ಜಾಗದಲ್ಲಿ ಅತಿಕ್ರಮವಾಗಿ ಪ್ರವೇಶಿಸಿದ್ದಾರೆ. ಎಚ್‌ಎಂಟಿ ಅರಣ್ಯ ಪ್ರದೇಶ ಬಗ್ಗೆ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಇದ್ದು, ಅದರ ತೀರ್ಪಿಗಾಗಿ ಕಾಯುತ್ತಿದ್ದೇವೆ ನಾವು ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಪ್ರಚಾರಕ್ಕಾಗಿ ಈ ವಿಚಾರ ತೆಗೆದುಕೊಳ್ಳಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ಸಚಿವ ಖಂಡ್ರೆ ಅವರಿಗೆ ಮಾಹಿತಿ ಮತ್ತು ಜ್ಞಾನದ ಕೊರತೆ ಇದೆ. ಅವರು ಭೇಟಿ ನೀಡಿರುವ ಜಾಗವು 2002ರಲ್ಲಿಯೇ ಕೆನರಾ ಬ್ಯಾಂಕಿಗೆ ನೀಡಲಾಗಿದೆ. ಸಚಿವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ನಾಳೆ ಅಥವಾ ನಾಡಿದ್ದು ಎಲ್ಲಾ ದಾಖಲೆಗಳ ಸಮೇತ ನಾನು ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ ಎಂದರು.
ಚಿಕ್ಕಮಗಳೂರು, ಕೊಡಗು, ಬೆಂಗಳೂರು ಸೇರಿದಂತೆ ಅನೇಕ ಕಡೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಅದನ್ನೆಲ್ಲ ತೆರವು ಮಾಡುವುದು ಬಿಟ್ಟು ಅರಣ್ಯ ಸಚಿವರು ಎಚ್‌ ಎಂಟಿ ಮೇಲೆ ಮಾತ್ರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆ ಎಂದರು. ಯಶ್ ನಟನೆಯ ಟಾಕ್ಸಿಕ್ ಚಿತ್ರದ ಚಿತ್ರೀಕರಣದ ಸೆಟ್ ಗಾಗಿ ಅರಣ್ಯ ಭೂಮಿಯಲ್ಲಿ ಮರಗಳ ಕಡಿಯಲು ಅನುಮತಿ ನೀಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಈಶ್ವರ್‌ ಖಂಡ್ರೆ ಮಂಗಳವಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *