Breaking News

ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳ ಹೆಚ್ಚಿನ ಹೊರೆ: ಆದಾಯ ಸಂಗ್ರಹದಲ್ಲಿ 12 ಸಾವಿರ ಕೋಟಿ ರೂ.ಕೊರತೆ

ಬೆಂಗಳೂರು: ಕರ್ನಾಟಕ ಸರ್ಕಾರ ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದು, ಆದಾಯ ಸಂಗ್ರಹದಲ್ಲಿ 12 ಸಾವಿರ ಕೋಟಿ ರೂ. ಕೊರತೆ ಇದೆ ಎಂದು ವರದಿಯಾಗಿದೆ. ಗ್ಯಾರಂಟಿ ಮತ್ತು ಸಬ್ಸಿಡಿಗಳಿಗೆ ಸರ್ಕಾರ 90 ಸಾವಿರ ಕೋಟಿ ರೂ. ವ್ಯಯಿಸುತ್ತಿದೆ. ಬೊಕ್ಕಸದಲ್ಲಿ ಹಣದ ಕೊರತೆ ಉಂಟಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರ ಸಾಲ ತರಲು ಚಿಂತಿಸುತ್ತಿದೆ.
ಸರ್ಕಾರಿ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 2024-25ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿ 12,000 ಕೋಟಿ ರೂಪಾಯಿ ಕಡಿಮೆ ಹಣ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.
ರಾಜಸ್ವ ಹೆಚ್ಚಿಸಲು ಕ್ರಮ ಕೈಗೊಳ್ಳಿ ಮತ್ತು ವೇಗ ನೀಡಿ ಎಂದು ಹಣಕಾಸು ಇಲಾಖೆಯೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾತನಾಡಿ, ಸಬ್ಸಿಡಿಗಳು ಮತ್ತು ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿಯಲ್ಲಿಯೇ ಕರ್ನಾಟಕದಲ್ಲಿ ಪ್ರತಿ 1,000 ಜನರಲ್ಲಿ 853 ಜನರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. 6.5 ಕೋಟಿ ಜನಸಂಖ್ಯೆಯಲ್ಲಿ 4.47 ಕೋಟಿ ಜನರು ಬಿಪಿಎಲ್ ಕಾರ್ಡ್ ಹೊಂದಿದ್ದು, ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು ಮರುಪರಿಶೀಲಿಸುವ ಅಗತ್ಯವಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದರು.
ಗೃಹಲಕ್ಷ್ಮಿ ಪ್ರಯೋಜನಗಳನ್ನು ಪಡೆಯಲು ಅವಿಭಜಿತ ಕುಟುಂಬಗಳು ವಿಭಜನೆಯಾಗುತ್ತಿವೆ. ವಿಭಜನೆಯಾದ ಕುಟುಂಬದ ಮಹಿಳೆಯರು ನಮ್ಮದು ಪ್ರತ್ಯೇಕ ಕುಟುಂಬ ಅಂತ ಹೇಳಿ ಎರಡು ಸಾವಿರ ರೂ. ಪಡೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ಸರ್ಕಾರವು ಗ್ಯಾರಂಟಿ ಯೋಜನೆ ಮರುಪರಿಶೀಲಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *