Breaking News

ಶಕ್ತಿ ಯೋಜನೆ ಯಥಾಸ್ಥಿತಿ ಮುಂದುರೆಯಲಿದೆ, ಯಾವುದೇ ಬದಲಾವಣೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಯಥಾಸ್ಥಿತಿ ಮುಂದುವರೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು
ಸುದ್ದಿಗಾರರ ಜೊತೆ ಇಂದು ಮಾತನಾಡಿದ ಅವರು, ‘ಮೂರೂವರೆ ವರ್ಷ ಅಷ್ಟೇ ಅಲ್ಲ, ಮುಂದಿನ ಅವಧಿಗೂ ಈ ಯೋಜನೆ ಮುಂದುವರೆಯಲಿದೆ’ ಎಂದರು.
ಅಷ್ಟಕ್ಕೂ ಉಪ ಮುಖ್ಯಮಂತ್ರಿ ನನ್ನ ಬಳಿ ಅವರ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಈ ಯೋಜನೆಯನ್ನು ಪರಿಶೀಲಿಸುವ ಹೇಳಿಕೆ ನೀಡಿದ್ದಾರೆ. ಆದರೆ, ನನ್ನ ಬಳಿ ಈ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದರು.
‌ನನಗೆ ಯಾವ ಮಹಿಳೆಯರೂ ಬಸ್‌ನಲ್ಲಿ ದುಡ್ಡು ಕೊಟ್ಟು ಟಿಕೆಟ್ ಖರೀದಿಸುತ್ತೇವೆ ಎಂದು ಹೇಳಿಲ್ಲ. ಡಿ.ಕೆ. ಶಿವಕುಮಾರ್ ಅವರಿಗೆ ಮಹಿಳೆಯರು ಇ- ಮೇಲ್ ಮೂಲಕ ತಿಳಿಸಿದ್ದಾರಂತೆ.‌ ಅದು ನನಗೆ ಗೊತ್ತಿಲ್ಲ.‌ ಐಷಾರಾಮಿ ಕಾರುಗಳಲ್ಲಿ ಸಂಚರಿಸುವ ಮಹಿಳೆಯರಷ್ಟೇ ಇದನ್ನು ಹೇಳಿದ್ದಾರೆ. ಯಾಕೆಂದರೆ ಅವರಿಗೆ ಬಸ್‌ನ ಅಗತ್ಯ ಇರುವುದಿಲ್ಲ ಎಂದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *