Breaking News

ಕಲಬುರಗಿಯಲ್ಲಿ ಕಲ್ಯಾಣ ಪಥ ಯೋಜನೆಯಡಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರ ಚಾಲನೆ: ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶದ ಗ್ರಾಮೀಣ ರಸ್ತೆ ಸುಧಾರಣೆ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಕಲ್ಯಾಣ ಪಥ ಯೋಜನೆಯಡಿ 1,000 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಇನ್ನು 15 ದಿನದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇಂದು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಈಗಾಗಲೇ ಎಲ್ಲೆಲ್ಲಿ ರಸ್ತೆ ನಿರ್ಮಿಸಬೇಕೆಂದು ಗುರುತಿಸಿ ಟೆಂಡರ್ ಸಹ ಕರೆಯಲಾಗಿದೆ. ಶೀಘ್ರವೇ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಇದಲ್ಲದೆ, ಪ್ರಗತಿ ಪಥ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 30-40 ಕಿ.ಮೀ. ರಸ್ತೆ ಕಾಮಗಾರಿ ಸಹ ಆರಂಭವಾಗಲಿದೆ. ಇದರ ಜೊತೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಲ್ಲಿಯೂ ರಸ್ತೆ ನಿರ್ಮಿಸುತ್ತಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶ ಭಾಗದ ಗ್ರಾಮೀಣ ಭಾಗದಲ್ಲಿ ಸಂಪರ್ಕ ಉತ್ತಮಗೊಳ್ಳಲಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ತಲಾ 30 ಲಕ್ಷ ರೂ. ಸುಮಾರು 400 ಸಮುದಾಯ ಶೌಚಾಲಯ ಆರ್.ಡಿ.ಪಿ.ಆರ್.ಇಲಾಖೆಯಿಂದ ನಿರ್ಮಿಸಲಾಗುತ್ತಿದೆ. ಕಲಬುರಗಿ ನಗರದಲ್ಲಿಯೂ ಬೇಡಿಕೆ ಅನಗುಣವಾಗಿ ಸಮುದಾಯ ಶೌಚಾಲಯ ನಿರ್ಮಿಸಲಾಗುವುದು ಎಂದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *