Breaking News

ಕಲಬುರಗಿಯಲ್ಲಿ ಸರ್ದಾರ್ ಪಟೇಲ್ ವೃತ್ತ ನವೀಕರಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ದೇಶದ ಮೊದಲನೇ ಉಪಪ್ರಧಾನಿ ಹಾಗೂ ಗೃಹಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತ್ಯುತ್ಸವ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಸರ್ದಾರ್ ಪಟೇಲ್ ವೃತ್ತದ ಆಧುನೀಕರಣ ಮತ್ತು ನವೀಕರಣ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ಮೇಯರ್ ಯಲ್ಲಪ್ಪ ನಾಯಕೊಡಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಶಶೀಲ್ ಜಿ. ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಜಯಂತ್ಯುತ್ಸವ ಸಮಿತಿ ಸಂಯೋಜಕ ಲಕ್ಷ್ಮಣ ದಸ್ತಿ , ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ ಸೇರಿದಂತೆ ಆಯಾ ಕ್ಷೇತ್ರದ ಗಣ್ಯರು ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *