ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು.
ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು.
ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಪ್ರತಿಯೊಬ್ಬ ಫಲಾನುಭವಿಗೆ ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಲಾಗುವುದು.
ಅರ್ಹ ರೈತರು ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿ ಸಲ್ಲಿಸಬಹುದು.
bigtvnews | Hubli Dharwad News | Kannada News | Karnataka News Hubli News | News In Hubli | Local news

