Breaking News

ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು: ಸಚಿವ ಡಿ.ಸುಧಾಕರ್

ಚಿತ್ರದುರ್ಗ : ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಒದಗಿಸಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದ್ದಾರೆ.
ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಲ್ಮಿಡಿ ಶಾಸನ ಉದ್ಘಾಟನೆ ನೆರವೇರಿಸಿದ ನಂತರ ಕಸಾಪ ಪದಾಧಿಕಾರಿಗಳ ಜೊತೆ ಮಾತನಾಡಿದರು.
ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಕನ್ನಡ ಭವನ ಜಿಲ್ಲೆಯ ಸಾಹಿತ್ಯಾಸಕ್ತರ ದಶಕಗಳ ಕನಸಾಗಿದೆ. ಪರಿಷತ್ತಿಗೆ ಪಿಳ್ಳೇಕೇರನಹಳ್ಳಿಯ ಬಾಪೂಜಿ ಕಾಲೇಜಿನ ಬಳಿ ವಿಶಾಲವಾದ ನಿವೇಶನವಿದೆ. ಆದರೆ ಕಟ್ಟಡಕ್ಕೆ ಅನುದಾನವಿಲ್ಲ. ಹೀಗಾಗಿ ಅಂದಾಜು 3 ಕೋಟಿ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಆದ್ಯತೆಯ ಮೇಲೆ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಿಂದ ಅನುದಾನ ಕೇಳಲಾಗುವುದು. ಜೊತೆಗೆ ಡಿಎಂಎಫ್ ಸೇರಿದಂತೆ ನಾನಾ ಇಲಾಖೆಗಳಿಂದ ಅನುದಾನ ಒದಗಿಸಲು ಪ್ರಯತ್ನ ನಡೆಸಲಾಗುವುದು ಕನ್ನಡ ಭವನಕ್ಕೆ ಪ್ಲಾನ್ ಮತ್ತು ಎಸ್ಟಿಮೇಟ್ ತಯಾರಿಸಲು ಸೂಚಿಸಿದರು. ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್, ಕಾರ್ಯದರ್ಶಿ ವಿ.ಶ್ರೀನಿವಾಸ ಖಜಾಂಚಿ ಸಿ.ಲೋಕೇಶ ಮತ್ತಿತರರಿದ್ದರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *