Breaking News

ವಕ್ಫ್ ಮಂಡಳಿ ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ: ಸಚಿವ ಪರಮೇಶ್ವರ್

ಬೆಂಗಳೂರು: ವಕ್ಫ್​ ಮಂಡಳಿ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್​​ ವಾಪಸ್ ಪಡೆಯಲು ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ವಕ್ಫ್​ ಮಂಡಳಿ ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತದೆಯೊ ಗೊತ್ತಿಲ್ಲ ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ ವಕ್ಫ್ ದಾಖಲಾತಿಯಲ್ಲಿ ಒಂದೇ ಇದ್ದರೆ ಮಾತ್ರ ಯಾವುದೇ ಗೊಂದಲ ಆಗುವುದಿಲ್ಲ. ಅಂತಿಮವಾಗಿ ಕಂದಾಯ ದಾಖಲಾತಿ ಮುಖ್ಯ ಅದರಲ್ಲಿ ಏನಿದೆಯೋ ಅದರಂತೆ ದಾಖಲಾಗಲಿದೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವ ಕೆಲಸ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *