Breaking News

ದಾವಣಗೆರೆಯಲ್ಲಿ ₹ 7 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ

ದಾವಣಗೆರೆ: ನಗರದಲ್ಲಿ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಸಂಸ್ಕರಿಸಿ ಮರುಬಳಕೆ ಮಾಡುವ ಘಟಕವನ್ನು ₹ 7 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದೆ. ಇದು ಕಾರ್ಯರೂಪಕ್ಕೆ ಬಂದರೆ ಕಟ್ಟಡದ ಭಗ್ನಾವಶೇಷಗಳಿಂದ ತಯಾರಿಸಿದ ಇಟ್ಟಿಗೆ, ಜಲ್ಲಿಕಲ್ಲು, ಎಂ-ಸ್ಯಾಂಡ್‌ ಮಾರುಕಟ್ಟೆಗೆ ಬರಲಿವೆ.
ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಈ ಘಟಕ ನಿರ್ಮಾಣಕ್ಕೆ ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಸಮೀಪದ ಹೊಸಹಳ್ಳಿಯಲ್ಲಿ 3 ಎಕರೆ ಗುರುತಿಸಲಾಗಿದೆ. ಪ್ರತಿ ನಿತ್ಯ 50 ಟನ್‌ ಕಟ್ಟಡ ತ್ಯಾಜ್ಯವನ್ನು ಸಂಸ್ಕರಿಸುವ ಘಟಕದ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಆರಂಭಗೊಂಡಿದೆ. ಮುಂದಿನ ವರ್ಷ ಈ ಘಟಕ ಕಾರ್ಯಾರಂಭವಾಗುವ ಸಾಧ್ಯತೆ ಇದೆ ಇದರಿಂದ ಮಹಾನಗರ ಪಾಲಿಕೆಗೆ ಹೊಸರೂಪದ ಆದಾಯ ಬರಲಿದೆ.
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿತ್ಯ ಸರಾಸರಿ 30ರಿಂದ 40 ಟನ್‌ ಕಟ್ಟಡ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಹಳೆ ಕಟ್ಟಡ, ರಸ್ತೆಯ ಅವಶೇಷಗಳನ್ನು ಮಹಾನಗರ ಪಾಲಿಕೆ ವಿಲೇವಾರಿಯ ಹೊಣೆಯನ್ನು ಈವರೆಗೆ ನಿಭಾಯಿಸುತ್ತಿರಲಿಲ್ಲ. ಮನೆ-ಮನೆ ತ್ಯಾಜ್ಯ ಸಂಗ್ರಹಿಸುವ ಪೌರಕಾರ್ಮಿಕರು ಕಟ್ಟಡ ತ್ಯಾಜ್ಯವನ್ನು ಮುಟ್ಟುವುದಿಲ್ಲ ಈ ಅವಶೇಷಗಳನ್ನು ಜನರು ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *