Breaking News

ಶಿವಮೊಗ್ಗದಲ್ಲಿ ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಗುಡ್ಡದ ಅರಕೆರೆ ಗ್ರಾಮಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, 1200 ಬಾಳೆ ಗಿಡ, 200 ಅಡಿಕೆ ಗಿಡ ನಾಶ ಮಾಡಿವೆ.
ನಿನ್ನೆ ರಾತ್ರಿಯಿಂದ ಬೆಳಗಿನ ಜಾವದವರೆಗೆ ಸುಮಾರು ಆರು ಆನೆಗಳು ತೋಟದಲ್ಲೇ ಬಿಡು ಬಿಟ್ಟಿದ್ದು, ಬೆಳಗ್ಗೆ ಕೆಲಸಗಾರರು ಬಂದಾಗ ಜಾಗ ಖಾಲಿ ಮಾಡಿವೆ.
ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಬಂದು ಕಚೇರಿಗೆ ಲಿಖಿತ ದೂರು ನೀಡುವಂತೆ ಸೂಚನೆ ನೀಡಿದ್ದಾರೆ.
ಅರಣ್ಯ ಇಲಾಖೆಯ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಸೋಮವಾರ ಡಿಎಫ್‌ಓ ಕಚೇರಿ ಮುಂದೆ ಧರಣಿಗೆ ತೀರ್ಮಾನ ಕೈಗೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *