ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನವದೆಹಲಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಕುರಿತು ಪರಿಶೀಲಿಸಿದರು.
ಪ್ರಯಾಣಿಕರ ಸೌಲಭ್ಯಗಳ ಬಗ್ಗೆ ಖುದ್ದಾಗಿ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, ಕಳೆದ ವರ್ಷ ದೀಪಾವಳಿ ಹಾಗೂ ಇತರ ಹಬ್ಬಗಳ ಸಂದರ್ಭಗಳಲ್ಲಿ 4 ಸಾವಿರ 500 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಪ್ರಯಾಣಿಕರ ಸೌಲಭ್ಯಕ್ಕಾಗಿ ಈ ಬಾರಿ 7 ಸಾವಿರದ 435 ವಿಶೇಷ ರೈಲುಗಳು ಸಂಚರಿಸುತ್ತಿವೆ. ಅಕ್ಟೋಬರ್ 31ರ ವರೆಗೆ ವಿಶೇಷ ರೈಲಗಳ ಮೂಲಕ 51 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

