Breaking News

ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ
ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಸ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗೆ ಕಿಡಿಕಾರಿದರು. ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ – ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದರು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *