Breaking News

ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ವಹಣೆಗೆ ಚಿಂತನೆ: ಸಚಿವ ಬೋಸರಾಜು

ಬೆಂಗಳೂರು: ಸೇವಾ ಮನೋಭಾವನೆಯಿಂದ ಉಚಿತವಾಗಿ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುತ್ತಿರುವ ಸತ್ಯಸಾಯಿ ಟ್ರಸ್ಟ್‌ ಜೊತೆಗೂಡಿ ರಾಯಚೂರಿನ ರಾಜೀವ್‌ ಗಾಂಧಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆಯನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎನ್‌ ಎಸ್‌ ಬೋಸರಾಜು ತಿಳಿಸಿದರು.
ಇತ್ತೀಚೆಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಸುಜಾತಾ ರಾಥೋಡ್, ರಾಯಚೂರು ಜಿಲ್ಲಾಧಿಕಾರಿಗಳಾದ ನಿತೇಶ್‌ ಕೆ, ಸತ್ಯಸಾಯಿ ಟ್ರಸ್ಟ್‌ ನ ಪದಾಧಿಕಾರಿಗಳಾದ ಗೋವಿಂದ ರೆಡ್ಡಿ ಸೇರಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ರಾಯಚೂರು ಜಿಲ್ಲಾ ಕೇಂದ್ರದಲ್ಲಿರುವ ರಾಜೀವ್‌ ಗಾಂಧಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆ ಸಮರ್ಪಕ ನಿರ್ವಹಣೆ ಮಾಡುವುದು ಬಹಳ ಅಗತ್ಯವಾಗಿದೆ. ಜಿಲ್ಲೆಯ ಬಡಜನರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡಬೇಕು ಎನ್ನುವ ದೃಷ್ಟಿಯಿಂದ ಪ್ರಾರಂಭಿಸಲಾಗುತ್ತಿರುವ ಆಸ್ಪ್ರತೆಯಲ್ಲಿ ಉತ್ತಮ ಪರಿಕರಗಳು ಹಾಗೂ ವೈದ್ಯ ಸಿಬ್ಬಂದಿಗಳು ಇದ್ದಾರೆ. ಈ ಸೌಲಭ್ಯಗಳನ್ನ ಬಳಸಿಕೊಂಡು ಇನ್ನಷ್ಟು ಉತ್ತಮ ಸೇವೆಯನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ.
ಈ ನಿಟ್ಟಿನಲ್ಲಿ ಉಚಿತವಾಗಿ ಅತ್ಯುತ್ತಮ ಆರೋಗ್ಯ ಸೇವೆಯನ್ನು ನೀಡುವ ಮೂಲಕ ಮನೆ ಮಾತಾಗಿರುವ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
ಸತ್ಯಸಾಯಿ ಲೋಕ ಸೇವಾ ಟ್ರಸ್ಟ್‌ನ ಸ್ವಾಮೀಜಿಗಳಾದ ಶ್ರೀ ಮಧುಸೂಧನ ಸಾಯಿ ಅವರು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಮುಂದಾಗಿದ್ದು ಅಧಿಕಾರಿಗಳೊಂದಿಗೆ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಪಿಪಿಪಿ ಮಾದರಿಯಲ್ಲಿ ಆಸ್ಪತ್ರೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಜನರಿಗೆ ತಲುಪಿಸಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಸತ್ಯಸಾಯಿ ಲೋಕ ಸೇವಾ ಟ್ರಸ್ಟ್‌ ಆಸ್ಪತ್ರೆಯ ನಿರ್ವಹಣೆ ಮಾಡಲಿದ್ದು ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲಿದೆ.
ಸಭೆಯಲ್ಲಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಕೆ ನಿತೇಶ್‌, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಸುಜಾತಾ ರಾಥೋಡ್, ಸತ್ಯಸಾಯಿ ಟ್ರಸ್ಟ್‌ ನ ಪದಾಧಿಕಾರಿಗಳಾದ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *