Breaking News

ಬಿಜೆಪಿಯನ್ನು ಸೋಲಿಸಬೇಕು, ಕಾಂಗ್ರೆಸ್ ಗೆಲ್ಲಲೇ ಬೇಕು ಎಂಬ ಸಂಕಲ್ಪದಿಂದ ಚುನಾವಣೆಗೆ ಒಗ್ಗಟ್ಟಾಗಿದ್ದೇವೆ : ಈಶ್ವರ ಖಂಡ್ರೆ

ಹುಬ್ಬಳ್ಳಿ: ಶಿಗ್ಗಾಂವಿ ಚುನಾವಣೆ ವಿಚಾರವಾಗಿ ಮೂರು ಉಸ್ತುವಾರಿಗಳ ಪ್ರಮುಖ ಮುಖಂಡರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾ‌ರ್ ಸಚಿವರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ಆರು ಜಿಲ್ಲಾ ಪಂಚಾಯಿತಿಗಳಿಗೆ ಹಾಗೂ ಮೂರು ಪುರಸಭೆಗಳಿಗೆ ಸಚಿವರನ್ನು ನೇಮಿಸಲಾಗಿದೆ. ಎಲ್ಲರಲ್ಲೂ ಹುಮ್ಮಸ್ಸು ಹಾಗೂ ಒಗ್ಗಟ್ಟಿದೆ. ಈ ಚುನಾವಣೆಯು ಅಭಿವೃದ್ಧಿ ಮತ್ತು ಅಭಿವೃದ್ಧಿ ಶೂನ್ಯದ ನಡುವೆ ನಡೆಯುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬಿಜೆಪಿಯನ್ನು ಸೋಲಿಸಬೇಕು, ಕಾಂಗ್ರೆಸ್ ಗೆಲ್ಲಲೇ ಬೇಕು ಎಂಬ ಸಂಕಲ್ಪದಿಂದ ಚುನಾವಣೆಗೆ ಒಗ್ಗಟ್ಟಾಗಿದ್ದೇವೆ. ಈ ಕ್ಷೇತ್ರದಲ್ಲಿ ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಬಸವರಾಜ ಬೊಮ್ಮಾಯಿ ಸಿಎಂ ಇದ್ದಾಗಲೂ ಇಲ್ಲಿ ಅಭಿವೃದ್ಧಿಗಳಾಗಿಲ್ಲ. ಬಿಜೆಪಿ ಕೊಟ್ಟ ಮಾತಿನಂತೆ ಎಂದೂ ನಡೆದುಕೊಂಡಿಲ್ಲ.

ಬಿಜೆಪಿಯವರು ವಚನ ಭ್ರಷ್ಟರು, ನಾವು ನುಡಿದಂತೆ ನಡೆದಿದ್ದೇವೆ. ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಅನೇಕ ಕಾರ್ಯಗಳನ್ನು ಮಾಡುತ್ತಿದ್ದೇವೆ. ಜನರು ನಮ್ಮ ಕೈ ಹಿಡಿದಿದ್ದಾರೆ, ಇನ್ನೂ ಮೂರೂವರೆ ವರ್ಷಗಳ ಕಾಲ ನಾವು ಮುನ್ನಡೆಯುತ್ತೇವೆ ಎಂದರು.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *