Breaking News

ಬಿಜೆಪಿ ವಿರುದ್ಧ ಕಿಡಿಕಾರಿದ ಈಶ್ವರ ಖಂಡ್ರೆ

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಹಣದ ಹೊಳೆ ಹರಿಸುವವರು ಬಿಜೆಪಿಯವರು. ಭ್ರಷ್ಟಾಚಾರ ಮಾಡುವವರು ಬಿಜೆಪಿಯವರು. ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಹಗರಣ ಮಾಡಿದ್ದಾರೆ. ರಾಜ್ಯದಲ್ಲಿ ಸುಮಾರು 50 ಸಾವಿರ ಜನರು ಸಾವನ್ನಪ್ಪಿದ್ದಾರೆ. ಆದ್ರೆ ಅವರು ತೋರಿಸಿದ್ದು ಮಾತ್ರ 4 ಸಾವಿರ ಜನ. ಅತೀ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದವರು ಬಿಜೆಪಿಯವರೆಂದು ಸಚಿವ ಈಶ್ವರ ಖಂಡ್ರೆ ಗರಂ ಆದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಖಂಡ್ರೆ, ಈ ಬಗ್ಗೆ ತನಿಖೆ ಮಾಡಲು ಈಗಾಗಲೇ ಸಮಿತಿ ರಚಿಸಲಾಗಿದೆ. ಸಮಿತಿ ಈಗಾಗಲೇ ತನಿಖೆ ಮಾಡುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ವಾಲ್ಮೀಕಿ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗಿದೆ. ಇನ್ನೂ ಸಹ ಈ ಬಗ್ಗೆ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *