Breaking News

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ. ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಸ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ತಪ್ಪಿನ ಅರಿವಾಗಿ ನೊಟೀಸ್ ವಾಪಾಪಸ್‌ ತೆಗೆದುಕೊಳ್ಳಲು ಹೇಳಿದ್ದಾರೆ. ಸರ್ಕಾರ ತಪ್ಪು ಮಾಡದಿದ್ದರೆ ರೈತರಿಗೆ ನೀಡಿದ್ದ ನೋಟಿಸ್ ಯಾಕೆ ವಾಪಾಸ್‌ ಪಡೆಯುತ್ತಿದ್ದರು ಎಂದು ಪ್ರಶ್ನಿಸಿದರು.

ವಕ್ಸ್ ಸಚಿವ ಜಮೀರ್ ಅವರು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನೊಟೀಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಡಿಸಿಗಳು ಸಚಿವರ ಆದೇಶದ ಮೇರೆಗೆ ನೊಟೀಸ್ ನೀಡಿರುವುದಾಗಿ ಹೇಳಿದ್ದಾರೆ. ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಯು ಟರ್ನ್ ಹೊಡೆಯುತ್ತಿದ್ದಾರೆ ಎಂದರು.

Share News

About Shaikh BigTv

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *