Breaking News

*ಸಾರ್ವಜನಿಕರ ಸಹಕಾರದಿಂದ ಅಪರಾಧ ಪ್ರಕರಣಗಳನ್ನು ತಡೆಯಲು ಸಾಧ್ಯ;ನೊಂದವರಿಗೆ ತಕ್ಷಣ ಪರಿಹಾರಕ್ಕೆ ಕ್ರಮ*: *ಎಸ್.ಪಿ. ಡಾ.ಗೋಪಾಲ ಬ್ಯಾಕೋಡ

ಧಾರವಾಡ : ಪೊಲೀಸ ಇಲಾಖೆಯ ನಿರಂತರ ನಿಗಾ ಮತ್ತು ಕಠಿಣ ಕ್ರಮ, ಜನಜಾಗೃತಿ ಕಾರ್ಯಕ್ರಮಗಳಿಂದಾಗಿ ರಸ್ತೆ ಅಪಘಾತ, ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿವೆ. ಸಾರ್ವಜನಿಕರ ಸಹಕಾರದಿಂದ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಪರಿಶಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರಮುಖರ ಕುಂದುಕೊರತೆ ಸಭೆ ಜರುಗಿಸಿ, ಮಾತನಾಡಿದರು.

ಸಾರ್ವಜನಿಕರ ಸಹಕಾರ ಮತ್ತು ಪೊಲೀಸ್ ಇಲಾಖೆ ಕ್ರಮಗಳಿಂದಾಗಿ ಶೇ.25 ರಷ್ಟು ರಸ್ತೆ ಅಪಘಾತಗಳು ಕಡಿಮೆ ಆಗಿವೆ. ಜಿಲ್ಲೆಯ ಪ್ರತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳು, ಅಪರಾಧ ಮತ್ತು ಡ್ರಗ್ಸ್ ನಿಯಂತ್ರಣ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಹನೆಯಿಂದ ವರ್ತಿಸಿದರೆ, ಎಲ್ಲದಕ್ಕೂ ಪರಿಹಾರ ಇರುತ್ತದೆ. ಯಾವುದೇ ಘಟನೆಗಳ ಸಂಭವಿಸುವ ಸಾಧ್ಯೆಗಳಿದ್ದರೆ ಪೊಲೀಸ್ ಮಾಹಿತಿ ನೀಡಬೇಕು. ಇದರಿಂದ ಮುಂಜಾಗ್ರತೆವಹಿಸಿ, ಅಪರಾಧ ನಿಯಂತ್ರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅನೇಕ ಮುಖಂಡರು ಸಹಕಾರ ನೀಡಿದ್ದಾರೆ ಎಂದು ಅವರು ಹೇಳಿದರು.

ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಬಹುದು. ಸಂಭಾವ್ಯ ಪ್ರಕರಣ, ಘಟನೆಗಳ ಕುರಿತು ಮಾಹಿತಿ ನೀಡುವದರಿಂದ ನೋಂದವರಿಗೆ ತಕ್ಷಣ ಪರಿಹಾರ ದೊರಕಿಸಲು ಅನುಕೂಲವಾಗುತ್ತದೆ. ಎಲ್ಲರಿಗೂ ರಕ್ಷಣೆ ನೀಡುವ ಜವಾಬ್ದರಿ ಇದೆ ಎಂದರು.

ಸಮಾಜದಲ್ಲಿ ಸಹೋದರತ್ವ, ಸಾಮರಸ್ಯ ಮತ್ತು ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರತಿ ಸಮಾಜಗಳ ಮುಖಂಡರ ಪಾತ್ರ ಮುಖ್ಯವಾಗಿದೆ. ಪ.ಜಾ. ಮತ್ತು ಪ.ಪಂ. ಸಮುದಾಯದ ಹಿತರಕ್ಷಣೆ ಮಾಡಲಾಗುತ್ತದೆ. ಯಾರಿಗಾದರೂ ತೊಂದರೆ ಉಂಟಾದರೆ ನೇರವಾಗಿ ಠಾಣೆಗೆ ದೂರು ಅಥವಾ ಮಾಹಿತಿ ನೀಡಬೇಕು. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ ಇಲಾಖೆಯಿಂದ ತಮ್ಮ ರಕ್ಷಣೆಗೆ, ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.

ಬೀಟ್ ಪೊಲೀಸ ಹಾಗೂ ತಹಶಿಲ್ದಾರ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಗ್ರಾಮೀಣ ಭಾಗದಲ್ಲಿ ನಾಗರಿಕ ಹಕ್ಕುಗಳು, ಸಮಾನತೆ, ಸಂವಿಧಾನದ ಆಶಯಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಯಾವುದೇ ಗ್ರಾಮ, ಪಟ್ಟಣಗಳಲ್ಲಿ ಪ.ಜಾ., ಪಂಗಡದವರಿಗೆ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಅವರು ತಿಳಿಸಿದರು.

ಸಭೆಯಲ್ಲಿ ವಿವಿಧ ಗ್ರಾಮ ಹಾಗೂ ನಗರಗಳ ಪ.ಜಾ. ಮತ್ತು ಪ.ಪಂಗಡಗಳ ಸಮುದಾಯ ಮುಖಂಡರು ಮಾತನಾಡಿ, ತಮ್ಮ ಹಾಗೂ ಸಮುದಾಯದ ಅಹವಾಲು, ಮನವಿಗಳನ್ನು ಪೊಲೀಸ ಅಧೀಕ್ಷಕರಿಗೆ ಸಲ್ಲಿಸಿದರು.

ಹುಬ್ಬಳ್ಳಿ ಗ್ರಾಮೀಣ ಸಿಪಿಐ ಮುರಗೇಶ ಚನ್ನಣ್ಣವರ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಡಿವೈಎಸ್ ಪಿ ನಾಗರಾಜ ಎಸ್.ಎಂ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.

ಸಭೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬೆಳಗಾವಿ ಡಿವೈಎಸ್ ಪಿ
ಜೆ. ಆರ್. ನಿಕ್ಕಂ, ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕಿ ಲಲಿತಾ ಹಾವೇರಿ, ಜಿಲ್ಲೆಯ ವಿವಿಧ ಪೊಲೀಸ ಠಾಣೆಗಳ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಮುಖಂಡರು, ಎಲ್ಲ ಪೊಲೀಸ ಠಾಣೆಗಳ ಪಿಎಸ್ಐ, ಸಿಪಿಐ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *