Breaking News

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ

ಹುಬ್ಬಳ್ಳಿ: ಬಿಜೆಪಿಯವರು ಕಳೆದ 11 ವರ್ಷಗಳಿಂದ 600 ಭರವಸೆಗಳನ್ನು ನೀಡಿದ್ದಾರೆ. ಇದರಲ್ಲಿ 10%ರಷ್ಟನ್ನು ಕೂಡಾ ಜಾರಿಗೊಳಿಸಿಲ್ಲ. ಕಾಂಗ್ರೆಸ್ ಸರ್ಕಾರ 2013-18 ರ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಯನ್ನು ಈಡೇರಿಸಿದೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸವಾಲ್ ಹಾಕಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯ ಗ್ಯಾರಂಟಿ ಯೋಜನೆಗಾಗಿ ವರ್ಷಕ್ಕೆ 55,000 ಕೋಟಿ ರೂಪಾಯಿಗಳನ್ನು ಕೊಡುತ್ತಿದ್ದೇವೆ. ಬಡವರು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕೆಂದು ನಾವು ಬಯಸಿದ್ದೇವೆ. ಆದರೆ ಇದನ್ನು ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ ಹಾಗಾಗಿ ಗ್ಯಾರಂಟಿ ಯೋಜನೆಯನ್ನು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *